ಅಂಕಿತಾ ಚತುರ್ವೇದಿ ಅವರು ಮಧ್ಯಪ್ರದೇಶದ ಭೋಪಾಲ್‌ನಲ್ಲಿರುವ ಅಜೀಮ್ ಪ್ರೇಮ್‌ಜಿ ಫೌಂಡೇಷನ್‌ನಲ್ಲಿ ವಿಜ್ಞಾನ ಸಂಪನ್ಮೂಲ ವ್ಯಕ್ತಿ ಮತ್ತು ಶಿಕ್ಷಕ ತರಬೇತುದಾರರಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಪ್ರಾಣಿವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ ಮತ್ತು ಮುಂಬೈನ ಹೋಮಿ ಭಾಭಾ ವಿಜ್ಞಾನ ಶಿಕ್ಷಣ ಕೇಂದ್ರದ ʼಬಿಲ್ಡಿಂಗ್ ಎಜುಕೇಟರ್ಸ್ ಫಾರ್ ಸೈನ್ಸ್, ಟೆಕ್ನಾಲಜಿ, ಅಂಡ್ ಮ್ಯಾಥಮೆಟಿಕ್ಸ್ʼ (BESTM) ಫೆಲೋಶಿಪ್ ಕಾರ್ಯಕ್ರಮದ ಭಾಗವಾಗಿದ್ದರು. ಅಂಕಿತಾ ಅವರು ಫೌಂಡೇಷನ್‌ಗೆ ಸೇರುವ ಮೊದಲು 13 ವರ್ಷಗಳ ಕಾಲ ವಿಜ್ಞಾನ ಶಿಕ್ಷಕಿಯಾಗಿ ಕೆಲಸ ಮಾಡಿದ್ದರು. ಈ ಪೈಕಿ ಎಂಟು ವರ್ಷಗಳ ಕಾಲ ಅವರು ಭೋಪಾಲ್‌ನ ಸಾಗರ್ ಪಬ್ಲಿಕ್ ಸ್ಕೂಲ್‌ನಲ್ಲಿ ಸೇವೆ ಸಲ್ಲಿಸಿದ್ದಾರೆ. ಅಂಕಿತಾ ಅವರು ಶಿಕ್ಷಕರು ಮತ್ತು ಮಕ್ಕಳನ್ನು ವಿಜ್ಞಾನದ ಪ್ರಾಯೋಗಿಕ ಅನುಭವಗಳಲ್ಲಿ ತೊಡಗಿಸುವುದನ್ನು ಆನಂದಿಸುತ್ತಾರೆ. ಕಳೆದ ಆರು ವರ್ಷಗಳಿಂದ ಅವರು ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು ಆಯೋಜಿಸುವ ಶಿಕ್ಷಕರ ತರಬೇತಿ ಕಾರ್ಯಕ್ರಮಗಳಲ್ಲಿ ತರಬೇತುದಾರರಾಗಿದ್ದಾರೆ. ಒಬ್ಬ ಶಿಕ್ಷಕಿಯಾಗಿ ಅಂಕಿತಾ ಅವರು ಇನ್ಸ್ಪೈರ್ ಮಾಣಕ್ ಪ್ರಶಸ್ತಿಗಳು ಸೇರಿದಂತೆ ವಿವಿಧ ರಾಷ್ಟ್ರ ಮಟ್ಟದ ವಿಜ್ಞಾನ ಸಂಬಂಧಿತ ಸ್ಪರ್ಧೆಗಳಲ್ಲಿ ಅನೇಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ. ಇವರು ಕವಿತೆಗಳನ್ನೂ ಬರೆಯುತ್ತಾರೆ.