ನೇಚರ್ ಕನ್ಸರ್ವೇಶನ್ ಫೌಂಡೇಶನ್

ನೇಚರ್ ಕನ್ಸರ್ವೇಶನ್ ಫೌಂಡೇಶನ್ (ಎನ್‌.ಸಿ.ಎಫ್‌.) ಪ್ರಕೃತಿಯ ಸಂಶೋಧನೆ ಮತ್ತು ಸಂರಕ್ಷಣೆಯ ಮೇಲೆ ಗಮನ ಹರಿಸುತ್ತಿರುವ ಒಂದು ಲಾಭರಹಿತ ಸಂಸ್ಥೆ. ಎನ್‌.ಸಿ.ಎಫ್‌.ನ ಶಿಕ್ಷಣ ಮತ್ತು ಸಾರ್ವಜನಿಕ ಸಹಭಾಗಿತ್ವದ ಕಾರ್ಯಕ್ರಮವು, ಮಕ್ಕಳು ಮತ್ತು ವಯಸ್ಕರು ಪರಿಸರ ವೀಕ್ಷಣೆಯಲ್ಲಿ ತೊಡಗಿಸಿಕೊಳ್ಳಲು ಹಲವಾರು ಯೋಜನೆಗಳನ್ನು ನಡೆಸುತ್ತಿದೆ. ಅಲ್ಲದೆ, ಎನ್‌.ಸಿ.ಎಫ್‌. ಪ್ರಕೃತಿ ಶಿಕ್ಷಣಕ್ಕೆ ಸಂಬಂಧಿಸಿದ ಸಾಹಿತ್ಯ ಮತ್ತು ಸಾಮಗ್ರಿಗಳನ್ನು ಅಭಿವೃದ್ಧಿಪಡಿಸುತ್ತದೆ, ಪ್ರದರ್ಶಿಸುತ್ತದೆ ಹಾಗೂ ವಿತರಿಸುತ್ತದೆ.