ಅಂಶಿಕಾ ಶರ್ಮಾ ಅವರು ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ರಾಹತ್‌ಗಢ್ ಬ್ಲಾಕ್‌ನಲ್ಲಿರುವ ಅಜೀಂ ಪ್ರೇಮ್‌ಜಿ ಫೌಂಡೇಷನ್‌ನಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕೆಲಸ ಮಾಡುತ್ತಿದ್ದಾರೆ. ಇವರಿಗೆ ಮಕ್ಕಳೊಂದಿಗೆ ಕೆಲಸ ಮಾಡುವುದು, ಅದರಲ್ಲೂ ವಿಶೇಷವಾಗಿ ಇಂಗ್ಲಿಷ್, ಪರಿಸರ ಅಧ್ಯಯನ ಮತ್ತು ಗಣಿತ ವಿಷಯಗಳಲ್ಲಿ ತೊಡಗಿಸಿಕೊಳ್ಳುವುದರಲ್ಲಿ ಬಹಳ ಆಸಕ್ತಿ. ಕಲಿಕೆಯನ್ನು ಆಕರ್ಷಕವಾಗಿ, ಅರ್ಥಪೂರ್ಣವಾಗಿ ಮತ್ತು ಮಕ್ಕಳ ನಿಜ ಜೀವನದ ಅನುಭವಗಳಿಗೆ ಹತ್ತಿರವಾಗುವಂತೆ ಮಾಡುವುದು ಇವರ ಉದ್ದೇಶ.