ರಾಧಾ ಎಂ. ಅವರು ಬೆಂಗಳೂರಿನ ಅಜೀಂ ಪ್ರೇಮ್‌ಜಿ ಫೌಂಡೇಷನ್‌ನಲ್ಲಿ ವಿಜ್ಞಾನ ಸಂಪನ್ಮೂಲ ವ್ಯಕ್ತಿಯಾಗಿ ಕೆಲಸ ಮಾಡುತ್ತಿದ್ದಾರೆ. ಇವರು ಸರ್ಕಾರಿ ಶಾಲಾ ಶಿಕ್ಷಕರೊಂದಿಗೆ ಕೆಲಸ ಮಾಡಿ ಅವರ ವಿಷಯದ ಜ್ಞಾನವನ್ನು ಹೆಚ್ಚಿಸಲು ಮತ್ತು ಅವರ ಬೋಧನಾ ಪದ್ಧತಿಗಳನ್ನು ಸುಧಾರಿಸಲು ಪ್ರಯತ್ನಿಸುತ್ತಾರೆ. ವಿದ್ಯಾರ್ಥಿಗಳಿಗೆ ಅರ್ಥಪೂರ್ಣ ಶೈಕ್ಷಣಿಕ ಅನುಭವಗಳನ್ನು ನೀಡುವ ನಿಟ್ಟಿನಲ್ಲಿ, ತರಗತಿಯ ಕಲಿಕಾ ಪ್ರಕ್ರಿಯೆಗಳು ಸುಲಲಿತವಾಗಿ ಮತ್ತು ಪರಿಣಾಮಕಾರಿಯಾಗಿ ನಡೆಯಲು ಅವಶ್ಯವಿರುವ ಬೆಂಬಲ ನೀಡುವುದು ಇವರ ಕೆಲಸದ ಮುಖ್ಯ ಗುರಿ.