ವಿನಯ್ ಸುರಮ್ ಅವರು ಬೆಂಗಳೂರಿನ ಅಜೀಂ ಪ್ರೇಮ್‌ಜಿ ಫೌಂಡೇಷನ್‌ನಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕೆಲಸ ಮಾಡುತ್ತಿದ್ದಾರೆ. ಇವರು ಸರ್ಕಾರಿ ಶಾಲಾ ಶಿಕ್ಷಕರೊಂದಿಗೆ ಸೇರಿ, ವಿಜ್ಞಾನ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ಹೆಚ್ಚು ಪ್ರಾಯೋಗಿಕವಾಗಿ ಮತ್ತು ಆಸಕ್ತಿದಾಯಕವಾಗಿ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಾರೆ. ಸಂಕೀರ್ಣವಾದ ವಿಜ್ಞಾನದ ವಿಷಯಗಳನ್ನು ಸರಳೀಕರಿಸಲು ಮತ್ತು ಅವುಗಳನ್ನು ತರಗತಿಯಲ್ಲಿ ಪರಿಣಾಮಕಾರಿಯಾಗಿ ಬೋಧಿಸಲು ಶಿಕ್ಷಕರಿಗೆ ನೆರವಾಗುವ ಬೋಧನಾ ಮಾಡ್ಯೂಲ್‌ಗಳನ್ನು ಇವರು ಸಿದ್ಧಪಡಿಸುತ್ತಾರೆ. ವಿನಯ್ ಅವರು ಉತ್ತರಾಖಂಡದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ರೂರ್ಕಿ ಇಂದ ಭೌತವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ವಿಜ್ಞಾನದ ಇತಿಹಾಸ ಮತ್ತು ತತ್ವಶಾಸ್ತ್ರ ಹಾಗೂ ವಿಜ್ಞಾನ ಶಿಕ್ಷಣವನ್ನು ಸುಧಾರಿಸುವ ವಿವಿಧ ವಿಧಾನಗಳನ್ನು ಅನ್ವೇಷಿಸುವುದು ಇವರ ಆಸಕ್ತಿಯ ವಿಷಯಗಳಾಗಿವೆ.